Saturday, June 28, 2025
spot_imgspot_img
spot_imgspot_img

ಕಾರು ಡಿಕ್ಕಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮೃತ್ಯು

- Advertisement -
- Advertisement -

ಡಿ.31ರಂದು ರಾತ್ರಿ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿಯ ಚಾರ ಗ್ರಾಮದಲ್ಲಿ ವರದಿಯಾಗಿದೆ.

ಜಯಂತ ಬೋರೋ(25) ಮೃತ ವ್ಯಕ್ತಿ.

ಶಿವಪುರ ಕಡೆಗೆ ಬರುತ್ತಿದ್ದ ಕಾರು ರಸ್ತೆ ಬದಿ ಇತರರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಜಯಂತ್ ಅವರಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!