ಹಾಸನ: ಹಾಸನಾಂಬ ದೇವಿ ದರ್ಶನ ಮುಗಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂದೇ ಕುಟುಂಬದ ಮೂವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾದ ಘಟನೆ ಹಾಸನ ನಗರದ ತಣ್ಣೀರಹಳ್ಳ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಕುಮಾರ್(38), ಕಾವ್ಯ(12) ಹಾಗೂ ಗಂಭೀರ ಗಾಯಗೊಂಡವರು ಪುಟ್ಟಮ್ಮ ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಪತ್ನಿ ಪುಟ್ಟಮ್ಮ, ಮಗಳು ಕಾವ್ಯ ಜೊತೆ ಕುಮಾರ್ ಹಾಸನಾಂಬ ದೇವಿ ದರ್ಶನಕ್ಕೆ ಹೋಗಿದ್ದರು. ದೇವಿ ದರ್ಶನ ಪಡೆದು ವಿಜಯನಗರದಲ್ಲಿರುವ ಸಂಬಂಧಿಕರ ಮನೆಗೆ ಮೂವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರೊಂದು ಮೂವರಿಗೂ ಡಿಕ್ಕಿ ಹೊಡೆದಿದೆ. ಕುಮಾರ್ ಹಾಗೂ ಕಾವ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಪುಟ್ಟಮ್ಮನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಫೋಟೋಗ್ರಾಫರ್ ಶಶಾಂಕ್ ಅಪಘಾತ ಮಾಡಿದ ಕಾರು ಚಾಲಕ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.