Saturday, June 28, 2025
spot_imgspot_img
spot_imgspot_img

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು..!

- Advertisement -
- Advertisement -

ಚಾಮರಾಜನಗರ: ನೂತನ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಕೊಡಸೋಗೆ ಗ್ರಾಮದ ಸಮೀಪ ನಡೆದಿದೆ.

ಮೃತಪಟ್ಟವರನ್ನು ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮಲಾಪುರ ಸೆಸ್ಕ್ ಕಚೇರಿಯಲ್ಲಿ ಅಸಿಸ್ಟೆಂಟ್‌ ಪವ‌ರ್ ಮ್ಯಾನ್ ಪ್ರತಾಪ್(28) ಹಾಗೂ ಕೊಂಗಳ್ಳಯ್ಯ ಹಾಗೂ ಗಂಭೀರ ಗಾಯಗೊಂಡವರನ್ನು ಮಂಡ್ಯ ಜಿಲ್ಲೆಯ ಅಭಿ ಎಂದು ಗುರುತಿಸಲಾಗಿದೆ.

ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಕೊಡಸೋಗೆ ಸಮೀಪದ ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಕಾರು ಢಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಕಾರಿನ ಮೇಲೆ ಮುರಿದು ಬಿದ್ದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು ಆತನನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ತೆರಕಣಾಂಬಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ತೆರಕಣಾಂಬಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!