Tuesday, July 21, 2026
spot_imgspot_img
spot_imgspot_img

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

- Advertisement -
- Advertisement -

ಹಾಸನ: ಸ್ವಿಫ್ಟ್ ಕಾರೊಂದು ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿ, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಪ್ರಿಯಾಂಕ (30), ವೈಭವ್ (1) ಎಂದು ಗುರುತಿಸಲಾಗಿದೆ. ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾದ ಮಂಜುನಾಥ್, ಪತ್ನಿ ಪ್ರಿಯಾಂಕ, ಪುತ್ರ ವೈಭವ್, ಸಂಬಂಧಿಗಳಾದ ಚಂದನ್, ದಿಲೀಪ್, ದೇವರಾಜು KA-02-MT-2690 ನಂಬರ್‌ನ ಸ್ವಿಫ್ಟ್ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಕಾರು ಬಿದ್ದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರನ್ನು ನಾಲೆಯಿಂದ ಮೇಲೆತ್ತಲಾಗಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!