Monday, October 19, 2026
spot_imgspot_img
spot_imgspot_img

ಬೈಕ್‌ಗೆ ಡಿಕ್ಕಿ ಹೊಡೆದ ಕಾರು; 2 ವರ್ಷದ ಮಗು ಸ್ಥಳದಲ್ಲೇ ಸಾವು

- Advertisement -
- Advertisement -

ವಿಜಯಪುರ: ಬೈಕ್‌ ಹಾಗೂ ಕಾರ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿ ಹೊಡೆದ ರಭಸಕ್ಕೆ 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳಿ ನಡೆದಿದೆ.

ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ‌. ಕೋಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ಘಟನೆ ನಡೆದಿದೆ. ರಾವುತ್(2) ಮಗು ಸ್ಥಳದಲ್ಲೆ ಸಾವನ್ನಪ್ಪಿದೆ. ರೇಣುಕಾ, ಯಮನವ್ವ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ಸದ್ಯ ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!