Friday, August 7, 2026
spot_imgspot_img
spot_imgspot_img

ಸೇತುವೆಗೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಕಾರು – ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಗಂಭೀರ ಗಾಯ

- Advertisement -
- Advertisement -

ಶಿವಮೊಗ್ಗ: ತಾಲೂಕಿನ ಚೊರಡಿ ಬಳಿ ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ.

ಚೊರಡಿಯ ಕುಮುದ್ವತಿ ಸೇತುವೆ ಮೇಲೆ ಈ ಅಪಘಾತ ನಡೆದಿದೆ. ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿಯಾಗಿದೆ. ಬಳಿಕ ಮೂರು ಬಾರಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭಿರವಾಗಿ ಗಾಯಗೊಂಡಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದವರೆಲ್ಲ ಸ್ನೇಹಿತರಾಗಿದ್ದು, ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!