Friday, June 5, 2026
spot_imgspot_img
spot_imgspot_img

ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು; 6 ಮಂದಿ ಸಾವು..!

- Advertisement -
- Advertisement -

ಹಾವೇರಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ 6 ಜನರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲೆ ರಜೆ ಇರುವ ಹಿನ್ನಲೆ ಸಂಬಂಧಿಕರೆಲ್ಲಾ ಸೇರಿ ರಾಣೀಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು. ಇಂದು ಅಗಡಿ ತೋಟಕ್ಕೆ ಹೋಗಿ ನಂತರ ಗೋವಾಕ್ಕೆ ಹೋಗುವ ಪ್ಲಾನ್ ನಲ್ಲಿದ್ದರು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಚಾಲಕ ಡಿಕ್ಕಿ ಹೊಡಿದಿದ್ದಾನೆ ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

- Advertisement -

Related news

error: Content is protected !!