- Advertisement -
- Advertisement -
ಉಪ್ಪಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಕಾರು, ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ.

ಬಂದಿಯೊಡು ಡಿ.ಎಂ ಆಸ್ಪತ್ರೆಯ ಸಿಬ್ಬಂದಿ ಆಸೀಫ್ ( 38), ನಿಹಲಾ (28), ರಮ್ಯಾ (30), ಲಲಿತಾ (34), ಜುಲ್ಫಿಕರ್ (30) ಗಾಯಗೊಂಡವರು. ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈಗೆ ತೆರಳುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.


- Advertisement -








