- Advertisement -
- Advertisement -



ಕೊಪ್ಪಳ: ಕಾರೊಂದು ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಘಟನೆ ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ನಾಲ್ಕು ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪಲ್ಟಿ ಹೊಡೆದ ಕಾರು ಕೊಪ್ಪಳ ನಿವಾಸಿ ಉಮರ್ ಎನ್ನುವವರಿಗೆ ಸೇರಿದ್ದಾಗಿದ್ದು, ಕೊಪ್ಪಳದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -








