- Advertisement -
- Advertisement -
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಹೆಮ್ಮಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕೆಮ್ಮಣ್ಣು ಹೂಡೆಯ ನಿವಾಸಿ ಸುಹಾನಾ (30) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸಿಬ್ಗತುಲ್ಲಾ, ಮಕ್ಕಳಾದ ಸಾಹಿಮ್, ಸಿದ್ರಾ, ಮನ್ಹಾ, ಮರಿಯಮ್ ಗಾಯಗೊಂಡಿದ್ದಾರೆ.

ಭಟ್ಕಳದಿಂದ ಹೂಡೆಗೆ ಬರುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಸಿಬ್ಗತ್ತುಲ್ಲಾ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

ಈ ಕುರಿತು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


- Advertisement -