Saturday, June 28, 2025
spot_imgspot_img
spot_imgspot_img

ಕಾರು-ಖಾಸಗಿ ಬಸ್ ಡಿಕ್ಕಿ; ಮಂಗಳೂರಿನ ಯುವಕ ಮೃತ್ಯು

- Advertisement -
- Advertisement -

ಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮಂಗಳೂರಿನ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ.

ಮಂಗಳೂರಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತಪಟ್ಟ ವ್ಯಕ್ತಿ. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ತೀರ್ಥಹಳ್ಳಿಯಿಂದ ಬಂದ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒರ್ವ ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿವೆ. ಗಾಯಳುಗಳು ಕೂಡ ಮಂಗಳೂರಿನವರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!