Sunday, June 29, 2025
spot_imgspot_img
spot_imgspot_img

ಉಡುಪಿ: ಕಾರು-ರಿಕ್ಷಾ ನಡುವೆ ಭೀಕರ ಅಪಘಾತ; ಯುವತಿ ಮೃತ್ಯು

- Advertisement -
- Advertisement -

ಉಡುಪಿ: ಕಾರು ಹಾಗೂ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ.

ಮೃತ ಯುವತಿಯನ್ನು ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ(22) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಸಂಬಂಧಿಕರ ಮನೆಯಿಂದ ಅಂಪಾರಿಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಮತ್ತೊಂದು ಕಾರನ್ನು ಓವರ್‌ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದರಿಂದ ಆಟೋ ರಿಕ್ಷಾ ಪಲ್ಟಿಯಾಗಿದ್ದು ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಅಂಬಿಕಾ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!