Saturday, June 6, 2026
spot_imgspot_img
spot_imgspot_img

ಬಂಟ್ವಾಳ: ಜಲ್ಲಿ ಸಾಗಾಟದ ಟಿಪ್ಪರ್ ಕಾರಿಗೆ ಢಿಕ್ಕಿ..!

- Advertisement -
- Advertisement -

ಬಂಟ್ವಾಳ: ಜಲ್ಲಿ ಸಾಗಾಟ ಮಾಡುತಿದ್ದ ಟಿಪ್ಪರ್ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.

ಕಾರು ಚಾಲಕ ಮೈಸೂರು ಮೂಲದ ಕೃಷ್ಣ ಅರಸ ಹಾಗೂ ಟಿಪ್ಪರ್ ಕೆ.ಎನ್.ಆರ್.ಸಿ. ಕಂಪೆನಿಗೆ ಸೇರಿರುವುದಾಗಿದೆ.

ಕೃಷ್ಣ ಅರಸರ ಮಗಳು ಮೂಡುಬಿದಿರೆಯ ಅಳ್ವಾಸ್ ಕಾಲೇಜಿನಲ್ಲಿ ಕಲಿಯುತ್ತಿದ್ದು ,ಈ ಹಿನ್ನೆಲೆಯಲ್ಲಿ ಅವರು ಮೂಡುಬಿದಿರೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಟಿಪ್ಪರ್ ಅತೀ ವೇಗದಿಂದ ಬಂದು ಎದುರಿನಿಂದ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

- Advertisement -

Related news

error: Content is protected !!