Monday, April 29, 2024
spot_imgspot_img
spot_imgspot_img

ಕಾರು-ಟಿಟಿ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ.

ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಆ ಕಡೆ ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದೆ. ಟಿಟಿ ಬಂದ ರಭಸಕ್ಕೆ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!