Thursday, May 16, 2024
spot_imgspot_img
spot_imgspot_img

ಭದ್ರಾ ನದಿಯಲ್ಲಿ ತೇಲಿದ ಕುರಿಗಳ ಶವ; ಕಳಸ ಬಳಿ ಭಾರಿ ವಾಮಾಚಾರ ; ಆತಂಕದಲ್ಲಿ ಸ್ಥಳೀಯರು

- Advertisement -G L Acharya panikkar
- Advertisement -

ಚಿಕ್ಕಮಗಳೂರು ಜಿಲ್ಲೆಯ ಕಳಸ ಬಳಿ ಭದ್ರಾ ನದಿಯ ದಡದಲ್ಲಿ ಭಾರಿ ಪ್ರಮಾಣದ ವಾಮಾಚಾರ ನಡೆದಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಭದ್ರಾ ನದಿ ಹೆಬ್ಬಾಳೆ ಸೇತುವೆ ಬಳಿ ಘಟನೆ ನಡೆದಿದೆ.

ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ ಮೇಕೆಗಳನ್ನು ಬಲಿ ಕೊಡಲಾಗಿದೆ. ರುಂಡ ಮುಂಡ ಬೇರ್ಪಡಿಸಿದ ಏಳೆಂಟು ಕುರಿ- ಮೇಕೆಗಳ ಶವಗಳು ನದಿಯಲ್ಲಿ ತೇಲುತ್ತಿದ್ದು, ಇದನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ.

ನದಿ ದಡದಲ್ಲಿ ವಾಮಾಚಾರಕ್ಕೆ ಬಳಸಿರುವ ವಸ್ತುಗಳು ಕಂಡುಬಂದಿವೆ. ಕೂದಲು, ಉಗುರು, ಮಣ್ಣಿನ ಬೊಂಬೆಗಳು, ರಕ್ತ, ನಿಂಬೆಹಣ್ಣು, ಕುಂಕುಮ ಇತ್ಯಾದಿ ವಾಮಾಚಾರಕ್ಕೆ ಬಳಸಿದ್ದು ಕಂಡುಬಂದಿದೆ. ತಡರಾತ್ರಿ ವೇಳೆ ಈ ಕೃತ್ಯ ನಡೆದಿದೆ. ಕಳಸ- ಹೊರನಾಡು ತೀರ್ಥಕ್ಷೇತ್ರಗಳಿಗೆ ಹೋಗುವ ಮುಖ್ಯರಸ್ತೆ ಬಳಿ ಕೃತ್ಯ ನಡೆದಿದ್ದು, ಯಾರ ಗಮನಕ್ಕೂ ಬಂದಿಲ್ಲ.

ಸ್ಥಳೀಯ ನಿವಾಸಿಗಳಲ್ಲಿ ವಾಮಾಚಾರದ ಬಗ್ಗೆ ಆತಂಕ ಮೂಡಿದ್ದು, ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ನದಿಯಿಂದ ಮೇಕೆಗಳ ಶವ ಹೊರಕ್ಕೆ ತೆಗೆದಿದ್ದಾರೆ. ವಾಮಾಚಾರದ ರಹಸ್ಯ ಭೇದಿಸಲು ಮುಂದಾಗಿದ್ದಾರೆ.

- Advertisement -

Related news

error: Content is protected !!