Monday, April 29, 2024
spot_imgspot_img
spot_imgspot_img

ಮಂಗಳೂರು: ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ದಿನಗಣನೆ- ಅಶೋಕ್ ಕುಮಾರ್ ರೈ

- Advertisement -G L Acharya panikkar
- Advertisement -

ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನವೆಂಬರ್‌ 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಮಂಗಳೂರಿನಲ್ಲಿ ಕಂಬಳ ಎಮ್ಮೆ ಮಾಲೀಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಸೇರಿದಂತೆ ರಜನಿಕಾಂತ್, ಐಶ್ವರ್ಯ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ನಟ ನಟಿಯರು ಭಾಗವಹಿಸಲಿದ್ದಾರೆ.

ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಅದರ ಮಾಲಕರು ಭಾಗವಹಿಸಲಿದ್ದಾರೆ ಎಂದರು.

ಇದರ ಜೊತೆ 125 ಸ್ಟಾಲ್ ಗಳಲ್ಲಿ ಕರಾವಳಿಯ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ. ಸುಮಾರು 7 ರಿಂದ 8 ಲಕ್ಷ ಜನರು ಇದನ್ನು ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿ ಪದಾಧಿಕಾರಿಗಳಾದ ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳಂಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.

- Advertisement -

Related news

error: Content is protected !!