Saturday, June 6, 2026
spot_imgspot_img
spot_imgspot_img

ಕಾರಿನಲ್ಲಿ ಗಾಂಜಾ ಸಾಗಾಟ; ಆರೋಪಿಗಳಿಬ್ಬರು ಅರೆಸ್ಟ್..!

- Advertisement -
- Advertisement -

ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮುಹಮ್ಮದ್ ಬೇಗ್ (38) ಮತ್ತು ಹೊಸನಗರದ ಕೆಂಚನಾಳ ಗ್ರಾಮದ ಗಜೇಂದ್ರ ಅಲಿಯಾಸ್ ಗಜ (37) ಎಂದು ಗುರುತಿಸಲಾಗಿದೆ.

ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ ಅಪಾರ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರಿಂದ 1.60 ಲಕ್ಷ ರೂ. ಮೌಲ್ಯದ 2 ಕೆಜಿ 150 ಗ್ರಾಂ ತೂಕದ ಒಣ ಗಾಂಜಾ ಮತ್ತು ಓಮಿನಿ ಕಾರನ್ನು ಜಪ್ತಿ ಮಾಡಲಾಗಿದೆ.

- Advertisement -

Related news

error: Content is protected !!