Saturday, June 20, 2026
spot_imgspot_img
spot_imgspot_img

ಅಕ್ರಮ ಭೂಮಿ ಮಂಜೂರಾತಿ ಕೇಸ್– ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ!

- Advertisement -
- Advertisement -

ಹಾಸನ: ಅಕ್ರಮ ಭೂಮಿ ಮಂಜೂರಾತಿ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

2018 ರಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಲಿಂಗೇಶ್ ಅವರು ಶಾಸಕಾರಾಗಿ ಆಯ್ಕೆಯಾಗಿದ್ದರು. ಆಗ ಅವರು ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಕ್ರಮವಾಗಿ ಭೂಮಿ ಮಂಜೂರಾತಿ ಮಾಡಿರುವ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು.

ಅಕ್ರಮ ಭೂಮಿ ಮಂಜೂರಾತಿ ಆರೋಪದ ಬಗ್ಗೆ ಕೋಲಾರದ ಆರ್‌ಟಿಐ ಕಾರ್ಯಕರ್ತ ರಮೇಶ್‌ಕುಮಾರ್ ಬೇಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೀಗ ಸಿಐಡಿ ಪೊಲೀಸರ ತಂಡ ಹಳೇಬೀಡಿನಲ್ಲಿರುವ ಅವರ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆದು, ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.

ಈ ಪ್ರಕರಣದಲ್ಲಿ ಅಂದಿನ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಹಲವರು ಬೇಲ್‌ಗಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅಧಿಕಾರಿಗಳಿಗೆ ಹಾಗೂ ಭೂಮಿ ಪಡೆದವರಿಗೆ ಬೇಲ್ ಸಿಕ್ಕಿತ್ತು. ಕೆ.ಎಸ್.ಲಿಂಗೇಶ್ ಅವರಿಗೆ ಜಾಮೀನು ಸಿಕ್ಕಿರಲಿಲ್ಲ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!