Saturday, May 4, 2024
spot_imgspot_img
spot_imgspot_img

ಬಂಟ್ವಾಳ: ಪದ್ಮನಾಭ ಸಾಮಂತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಪ್ರಕರಣ; ಜಿಲ್ಲಾ ಎಸ್ಪಿ ರಿಷ್ಯಂತ್ ಸಿ ಬಿ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರ ನಿಯೋಗ

- Advertisement -G L Acharya panikkar
- Advertisement -

ಬಂಟ್ವಾಳ : ಸಾಮಾಜಿಕ ಹೋರಾಟಗಾರ, R.T.I.ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮುಖಂಡ ವಾಮದಪದವು ಪದ್ಮನಾಭ ಸಾಮಂತ್ ರವರ ಮೃತದೇಹ ಮಾರ್ಚ್ 31ರಂದು ಅವರ ಮನೆಯ ಸ್ವಲ್ಪ ದೂರದಲ್ಲಿನ ನಿರ್ಜನ ಗುಡ್ಡ ಪ್ರದೇಶದಲ್ಲಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನಲ್ಲಿ ಸಂಶಯಗಳಿದ್ದು, ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮುಖಂಡರ ನಿಯೋಗ ಜಿಲ್ಲಾ ಎಸ್ಪಿ ರಿಷ್ಯಂತ್ ಸಿ ಬಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಪದ್ಮನಾಭ ಸಾಮಂತ್ ರವರು ಒಬ್ಬ ಆರ್ ಟಿಐ ಕಾರ್ಯಕರ್ತನಾಗಿದ್ದು,ಬಂಟ್ವಾಳ ಶಾಸಕರ 5ವರ್ಷಗಳ ಅವಧಿಯಲ್ಲಿ ನಡೆದ ಅಕ್ರಮ-ಸಕ್ರಮಗಳಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರು ದಾಖಲಿಸಿ ಭೂ ಮಾಫಿಯಾದ ನಿದ್ದೆಗೆಡಿಸಿದ್ದರು.

ಬಿಜೆಪಿಯ ಕೆಲವೊಂದು ವ್ಯಕ್ತಿಗಳಿಗೆ, ಭ್ರಷ್ಟ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನನಾಗಿದ್ದ ಪದ್ಮನಾಭ ಸಾಮಂತ್, ರಾಜಕೀಯ ಭ್ರಷ್ಟರಿಗೆ, ಲಂಚಬಾಕ- ಅಡ್ಜೆಸ್ಟ್ ಮೆಂಟ್ ಅಧಿಕಾರಿಗಳಿಗೆ ಕಂಠಕನಾಗಿದ್ದ, ಹೀಗೆ ಬಂಟ್ವಾಳ ತಾಲೂಕಿನಾದ್ಯಂತ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳ ಬಗ್ಗೆ ಪ್ರಶ್ನೆಯನ್ನು ಮಾಡುತ್ತಾ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದರು ಎಂದು ಕಾಂಗ್ರೆಸ್ ಮುಖಂಡರ ನಿಯೋಗ ತಿಳಿಸಿದೆ.

ಹೀಗಿರುವಲ್ಲಿ ಪದ್ಮನಾಭ ಸಾಮಂತ್ ರವರು ಒಬ್ಬ ಧೃಡ ಮನಸ್ಸಿನ ವ್ಯಕ್ತಿಯಾಗಿದ್ದು, ಯಾವುದೇ ರೀತಿಯಲ್ಲಿ ಆತ್ಮಹತ್ಯೆ ಮಾಡತಕ್ಕಂತಹ ದುರ್ಬಲ ಮನಸ್ಸಿನ ವ್ಯಕ್ತಿಯಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಆದರೆ ಅವರ ಸಾವಿನ ರೀತಿ ಮತ್ತು ಮೃತದೇಹ ಇದ್ದಂತಹ ಸ್ಥಿತಿಗತಿ ಅವರ ಸಾವಿನ ಬಗ್ಗೆ ಸಂಶಯವನ್ನು ವ್ಯಕ್ತಪಡಿಸುತ್ತಿದೆ. ಆದುದರಿಂದ ಈ ಎಲ್ಲಾ ಸನ್ನಿವೇಶಗಳು ಪದ್ಮನಾಭ ಸಾಮಂತ್ ರವರ ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ.

ಆದುದರಿಂದ ಪದ್ಮನಾಭ ಸಾಮಂತ್ ರವರ ಸಾವು ಹೇಗೆ ಸಂಭವಿಸಿತು ಹಾಗೂ ಅದರ ಹಿಂದಿನ ಕಾರಣವನ್ನು ಕಂಡು ಹಿಡಿಯಲು ಸೂಕ್ತ ತನಿಖೆಯನ್ನು ಕೈಗೊಳ್ಳಬೇಕು. ಈ ಕಾರಣಕ್ಕಾಗಿ ವಿಶೇಷ ಪೋಲಿಸ್ ತಂಡವನ್ನು ರಚಿಸಿ ತನಿಖೆ ಮಾಡಬೇಕು. ಒಂದು ವೇಳೆ ತನಿಖೆಯಲ್ಲಿ ಆತ್ಮಹತ್ಯೆ ಎಂದು ತಿಳಿದುಬಂದರೆ ಇದಕ್ಕೆ ಪ್ರಚೋದನೆಗೈದು ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ವಿನಂತಿಸಿದರು.

ಈ ಸಂದರ್ಭದಲ್ಲಿ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ರೊಡ್ರಿಗಸ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ,ಎಂ ಎಸ್ ಮೊಹಮ್ಮದ್, ಅಬ್ಬಾಸ್ ಅಲಿ,ನಾರಾಯಣ ನಾಯ್ಕ್,ಪ್ರಶಾಂತ್ ಕುಲಾಲ್,ಸುರೇಶ್ ನಾವೂರ ವಕೀಲರು,ಉಮಾಕರ್ ಬಂಗೇರ, ಪ್ರವೀಣ್ ರೊಡ್ರಿಗಸ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!