



ಬೆಂಗಳೂರು: ಆರ್ಎಸ್ಎಸ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ಗೆ ಜಾಮೀನು ಮಂಜೂರು ಮಾಡಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಬ್ಬರಿಗೂ ಜಾಮೀನು ಮಂಜೂರು ಮಾಡಿದ್ದು, ತಲಾ 10 ಸಾವಿರ ರೂ. ವೈಯಕ್ತಿಕ ಶ್ಯೂರಿಟಿ ನೀಡುವಂತೆ ಕೋರ್ಟ್ ಸೂಚಿಸಿದೆ.
ತೇಜಸ್ ಗೌಡ ಎಂಬವರು ಕೋರ್ಟ್ಗೆ ಖಾಸಗಿ ದೂರು ನೀಡಿದ್ದರು. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ನಲಪಾಡ್ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಕಳೆದ ವಿಚಾರಣೆ ವೇಳೆ ಇಬ್ಬರೂ ನಾಯಕರು ಕೋರ್ಟ್ನಿಂದ ವಿನಾಯಿತಿ ಪಡೆದುಕೊಂಡಿದ್ದರು.
ಕಳೆದ ಬಾರಿ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚಿಸಿತ್ತು. ಆದರೆ ಸದಾಶಿವನಗರ, ಅಶೋಕ ನಗರ ಪೊಲೀಸರು ಹಾಜರಾಗಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ರಿಪೋರ್ಟ್ ತೃಪ್ತಿಕರವಾಗಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು. ಖುದ್ದು ಹಾಜರಾಗುವಂತೆ ಸೂಚಿಸಿ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.








