Monday, August 10, 2026
spot_imgspot_img
spot_imgspot_img

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR

- Advertisement -
- Advertisement -

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹೊರಿಸಿ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಸ್ವಾಮೀಜಿಯ ಹೇಳಿಕೆಗಳು ಪ್ರಚೋದನಕಾರಿಯಾಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ತರಬಹುದು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.ನವೆಂಬ‌ರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ವತಿಯಿಂದ ವಕ್ಸ್ ಬೋರ್ಡ್ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಸ್ವಾಮೀಜಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ. ಅಷ್ಟು ಪ್ರೀತಿ ಇದ್ದರೆ ನಿಮ್ಮ ಮನೆ, ಸೈಟ್ ಬರೆದುಕೊಡಿ ಎಂದು ಹೇಳಿದ್ದರು.ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ, ಬಾಯಿ ತಪ್ಪಿ ಆ ಹೇಳಿಕೆ ನೀಡಿದೆ. ಅದಕ್ಕೆ ವಿಷಾದಿಸುತ್ತೇನೆ. ಮುಸ್ಲಿಮರೂ ಭಾರತೀಯರೆ. ಆದರೆ, ರೈತರಿಗೆ ಒಳ್ಳೆಯದಾಗಬೇಕು ಅಷ್ಟೇ ಎಂದು ಹೇಳಿದ್ದರು. ಆದರೆ ಬಳಿಕ ಅವರ ವಿರುದ್ಧ ದೂರು ನೀಡಲಾಗಿತ್ತು.

- Advertisement -

Related news

error: Content is protected !!