Saturday, June 28, 2025
spot_imgspot_img
spot_imgspot_img

ಸುಳ್ಯ: ರಸ್ತೆಬದಿ ಮಲಗಿದ್ದ ಜಾನುವಾರುಗಳಿಗೆ ಅಮಲು ಇಂಜೆಕ್ಷನ್ ನೀಡಿ ಸಾಗಾಟ :

- Advertisement -
- Advertisement -

ಸುಳ್ಯ: ರಸ್ತೆ ಬದಿಯಲ್ಲಿ ಮಲಗಿದ್ದ ದನಗಳಿಗೆ ಅಮಲು ಇಂಜೆಕ್ಷನ್ ನೀಡಿದ ಕಿಡಿಗೇಡಿಗಳು ಸ್ಕಾರ್ಫಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ್ದು, ಈ ದೃಶ್ಯ ಸ್ಥಳೀಯ ವ್ಯಕ್ತಿಯೊಬ್ಬರ ಮನೆಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾದ ಘಟನೆ ಸುಳ್ಯ ಸಂಪಾಜೆ ಗ್ರಾಮದ ಗಡಿಕಲ್ಲಿನಲ್ಲಿ ಜೂ.7ರಂದು ರಾತ್ರಿ ನಡೆದಿದೆ.

ಗಡಿಕಲ್ಲು ಮಸೀದಿಯ ಪಕ್ಕದಲ್ಲಿ ಪ್ರತಿನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮುಖ್ಯರಸ್ತೆ ಪಕ್ಕದಲ್ಲಿ ಮಲುಗುತ್ತಿದ್ದವು. ಜೂ.7ರ ತಡರಾತ್ರಿ ಸುಳ್ಯ ಕಡೆಯಿಂದ ಕಪ್ಪು ಬಣ್ಣದ ಸ್ಕಾರ್ಫಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು, ರಸ್ತೆ ಬದಿಯಲ್ಲಿ ಮಲಗಿದ್ದ ದನಗಳ ಪೈಕಿ ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಬಳಿಕ ಆ ದನಗಳನ್ನು ತಮ್ಮ ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿಕೊಂಡು ಸುಳ್ಯ ಭಾಗಕ್ಕೆ ತೆರಳಿರುವುದು ಕಂಡುಬಂದಿದೆ.

ಮಸೀದಿಯ ಬಳಿ ಮುಖ್ಯರಸ್ತೆ ಬದಿಯಲ್ಲಿ ಎರಡು ಲಾರಿಗಳು ನಿಂತಿದ್ದವು. ಕಿಡಿಗೇಡಿಳು ತಮ್ಮ ಸ್ಕಾರ್ಫಿಯೋ ವಾಹನವನ್ನು ಈ ಎರಡು ಲಾರಿಗಳ ಮಧ್ಯದಲ್ಲಿ ನಿಲ್ಲಿಸಿ, ದನಗಳನ್ನು ತುಂಬಿಸಿಕೊಂಡು ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!