Thursday, May 16, 2024
spot_imgspot_img
spot_imgspot_img

ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ- ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟ್‌ಗೆ ಅರ್ಜಿ

- Advertisement -G L Acharya panikkar
- Advertisement -

ಬೆಂಗಳೂರು:ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಪಟ್ಟಂತೆ ಡಿ ಕೆ ಶಿವಕುಮಾರ್ ಅವರಿಗೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆ ಇದೀಗ ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆ ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಎರಡು ವಾರದಲ್ಲಿ ಅರ್ಜಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಲಾಗಿದೆ. ಹೀಗಾಗಿ ಶೀಘ್ರ ವಿಚಾರಣೆಗೆ ಸಿಬಿಐ ಎಸ್​ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ನ.22 ಕ್ಕೆ ನಿಗದಿಪಡಿಸಲಾಗಿದೆ.

ಅಕ್ಟೋಬರ್​​​​​ 20 ರಂದು ಈ ಕೇಸ್​ಗೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್​​​​ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.ಇದಕ್ಕೆ ಕಾರಣವೇನು ಎಂಬುದಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪಿನ ವಿವರವನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಸಿಬಿಐ 84 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದೆ.

ತೀರ್ಪಿನಲ್ಲಿ ಸಿಬಿಐ ಸಲ್ಲಿಸಿದ ವರದಿ ಉಲ್ಲೇಖ ಮಾಡಿದ್ದು, 70 ಸ್ಥಿರಾಸ್ತಿ, 30 ಚರಾಸ್ತಿ, 47 ಆದಾಯ, 125 ವಿವಿಧ ಖರ್ಚುಗಳ ಉಲ್ಲೇಖ ಮಾಡಿದ್ದು, ಹಲವು ಅನುಮಾನಾಸ್ಪದ ನಗದು ವ್ಯವಹಾರಗಳ ಉಲ್ಲೇಖವಿದೆ ಎಂದು ನ್ಯಾ.ಕೆ.ನಟರಾಜನ್‌ರವರಿದ್ದ ಹೈಕೋರ್ಟ್ ಪೀಠ ತೀರ್ಪು ನೀಡಿತ್ತು.

ಐಟಿ ಇಲಾಖೆ, ಇಡಿ, ಸಿಬಿಐ ದಾಖಲೆಗಳನ್ನು ಸಂಗ್ರಹಿಸಿದೆ. ತನಿಖೆಯ ಈ ಹಂತದಲ್ಲಿ ಅಂತಿಮ ನಿರ್ಣಯ ಮಾಡಲಾಗದು. ಡಿಕೆ ಶಿವಕುಮಾರ್​ ಸಲ್ಲಿಸಿದ ದಾಖಲೆಗಳನ್ನು ತನಿಖಾಧಿಕಾರಿ ಪರಿಶೀಲಿಸಬೇಕು. ಕೋರ್ಟ್ ಈ ಹಂತದಲ್ಲಿ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲಾಗದು ಎಂದು ಹೈಕೋರ್ಟ್ ತಿಳಿಸಿತ್ತು.

- Advertisement -

Related news

error: Content is protected !!