Sunday, October 4, 2026
spot_imgspot_img
spot_imgspot_img

*ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ಡಿಕೆಶಿ, ಡಿ.ಕೆ.ಸುರೇಶ್ ಮನೆ ಮೇಲೆ ಸಿಬಿಐ ದಾಳಿ* !!

- Advertisement -
- Advertisement -

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ.
ಸೋಮವಾರ ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ ಸಿಬಿಐ ದಾಳಿ ನಡೆದಿದ್ದು, ಇಡಿ ವಿಚಾರಣೆ ಬಳಿಕ ಸಿಬಿಐ ಕಂಟಕ ಶುರುವಾಗಿದೆ.

ಬೆಳಿಗ್ಗೆ 6 ಗಂಟೆಯಿಂದಲೇ ಸಿಬಿಐ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಸದಾಶಿವನಗರ, ಕನಕಪುರ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇ.ಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರ ತನಿಖೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಈಗ ಸಿಬಿಐ ದಾಳಿ ನಡೆದಿರುವುದು ಬಂಡೆಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಇದೇ ವೇಳೆ ಸಂಸದ ಡಿ.ಕೆ ಸುರೇಶ್ ಅವರ ನಿವಾಸದ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

Related news

error: Content is protected !!