Friday, June 19, 2026
spot_imgspot_img
spot_imgspot_img

10ನೇ ತರಗತಿ ಸಿಬಿಎಸ್‌ಇ ಫಲಿತಾಂಶ ಪ್ರಕಟ!

- Advertisement -
- Advertisement -

ಹೊಸದಿಲ್ಲಿ: ಕೋವಿಡ್-19 ಅಲೆಯಿಂದಾಗಿ ಏಪ್ರಿಲ್‌ನಲ್ಲಿ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆ ರದ್ದಾಗಿತ್ತು. ಮುಖ್ಯ ಪರೀಕ್ಷೆಗಳು ಇಲ್ಲದೇ 2021ರ ಸಾಲಿನಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಫಲಿತಾಂಶ ಸಿದ್ಧಪಡಿಸಲಾಗಿದೆ.

10ನೇ ತರಗತಿಯ ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್‌ಇ) ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಶೇ.99.04ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ಬಾಲಕರಿಗಿಂತ ಶೇ.0.35ರಷ್ಟು ಹೆಚ್ಚು ಫಲಿತಾಂಶದೊಂದಿಗೆ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

57,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ. 16,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿಶಾಂಶ ಇನ್ನೂ ಪ್ರಕ್ರಿಯೆಯಲ್ಲಿದೆ ಎಂದು ಸಿಬಿಎಸ್‌ಇ ತಿಳಿಸಿದೆ. 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

- Advertisement -

Related news

error: Content is protected !!