Saturday, June 13, 2026
spot_imgspot_img
spot_imgspot_img

ಕಂಕನಾಡಿ: ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸ್‌ ದಾಳಿ…! ವಿಟ್ಲ ಮೂಲದ ಕೋಡಪದವು ಸಫ್ವಾನ್ ಪಾಲುದಾರಿಕೆಯ ಹುಕ್ಕಾಬಾರ್

- Advertisement -
- Advertisement -

ಮಂಗಳೂರು: ಕಂಕನಾಡಿಯಲ್ಲಿರುವ ಮಾಲ್ ವೊಂದರ ಪಾರ್ಕಿಂಗ್ ನಲ್ಲಿರುವ ಕೊಠಡಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿತ್ತೆನ್ನಲಾದ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಂಕನಾಡಿಯ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ BLACK MOON RESTO CAFÉ ಕಾನೂನುಬಾಹಿರವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಗೆ ದಾಳಿ ನಡೆಸಲಾಗಿದೆ. ಅಕ್ರಮ ಹುಕ್ಕಾ ಬಾರ್ ನಡೆಸುತ್ತಿದ್ದ ಆರೋಪಿಗಳಾದ ಸಿದ್ದೀಕ್ ಯಾನೆ ಎಂ.ಎಫ್‌.ಸಿ.ಸಿದ್ದೀಕ್, ಅಬ್ದುಲ್ ನಾಸಿರ್ ಮತ್ತು ಸಫ್ಘಾನ್ ಎಂಬವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

2023-24ರಲ್ಲಿ ಕೆಫೆಟೇರಿಯಾ ನಡೆಸಲು ಮಂಗಳೂರು ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆದಿದ್ದ ಆರೋಪಿಗಳು ಕೆಫೆಟೇರಿಯಾ ನೆಪದಲ್ಲಿ ಅಕ್ರಮ ಹುಕ್ಕಾ ಬಾ‌ರ್ ನಡೆಸುತ್ತಿದ್ದರು. ಇವರು ನಿಯಮಗಳನ್ನು ಉಲ್ಲಂಘಿಸಿ ಯುವಕರನ್ನು ಮಾದಕ ಭ್ರಮಾ ಲೋಕದಲ್ಲಿ ತೇಲಿಸಿ ಹೆಚ್ಚಿನ ಹಣ ಸಂಪಾದಿಸಿ ಅಪರಾಧವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹುಕ್ಕಾ ಬಾರ್ ನಿಂದ ಹುಕ್ಕಾ ಸೇದುವ ಉಪಕರಣಗಳು, ತಂಬಾಕು ಉತ್ಪನ್ನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!