Wednesday, April 24, 2024
spot_imgspot_img
spot_imgspot_img

ಪೊಲೀಸ್ ಠಾಣೆಯಲ್ಲಿ ಸಿಸಿಟಿವಿ ಕಡ್ಡಾಯ- ಸುಪ್ರೀಂ ಕೋರ್ಟ್

- Advertisement -G L Acharya panikkar
- Advertisement -

ನವದೆಹಲಿ: ಪ್ರತಿ ಪೊಲೀಸ್ ಠಾಣೆಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ನಿರ್ದೇಶನಗಳನ್ನು ಆದಷ್ಟು ಶೀಘ್ರ ಜಾರಿಗೆ ತರಬೇಕು ಎಂದು ನ್ಯಾಯಮೂರ್ತಿ ಆರ್.ಎಫ್. ನಾರಿಮನ್ ನೇತೃತ್ವದ ಪೀಠ ಸೂಚನೆ ನೀಡಿದೆ.


ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಿಬಿಐ, ಎನ್ಐಎ ಮುಂತಾದ ಕೇಂದ್ರಿಯ ಸಂಸ್ಥೆಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ರೆಕಾರ್ಡಿಂಗ್ ಉಪಕರಣಗಳನ್ನು ಅಳವಡಿಸುವಂತೆ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.


ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟುವ ಉದ್ದೇಶದಿಂದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಜೈಲುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸಲಹೆ ನೀಡಿದೆ.
ಪರಮ್ ವೀರ್ ಸಿಂಗ್ ಸೈನಿ ಎಂಬುವರು ಸಲ್ಲಿಸಿರುವ ಎಸ್ಎಲ್’ಪಿ ವಿಲೇವಾರಿ ವೇಳೆ ನ್ಯಾಯಾಲಯ ಈ ಆದೇಶ ನೀಡಿದ್ದು, ಹೇಳಿಕೆಗಳ ಆಡಿಯೋ-ವಿಡಿಯೋ ರೆಕಾರ್ಡಿಂಗ್ ಹಾಗೂ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ಚರ್ಚೆ ನಡೆದಿದೆ.

- Advertisement -

Related news

error: Content is protected !!