Friday, October 2, 2026
spot_imgspot_img
spot_imgspot_img

ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

- Advertisement -
- Advertisement -

ವಿಟ್ಲ: ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ(ಅ.02)ಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಜಯರಾಮ್ ರೈ ಅವರು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಸರಳತೆಯ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರು ಹಾಗೂ ನಾಯಕರಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಉಪ ಪ್ರಾಂಶುಪಾಲೆಯರಾದ ಶ್ರೀಮತಿ ಕವಿತಾ ಮತ್ತು ಶ್ರೀಮತಿ ಹೇಮಲತಾ, ಎಲ್ಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸ್ಕೌಟ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಂದಿನಿ ಅವರು ಪ್ರಾರ್ಥನೆ ನೆರವೇರಿಸಿ, ಗೀತಾ ಆರ್. ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

- Advertisement -

Related news

error: Content is protected !!