Thursday, April 18, 2024
spot_imgspot_img
spot_imgspot_img

ಕೊರೋನಾ ಲಸಿಕೆಗಾಗಿ ಕೇಂದ್ರ ಸರ್ಕಾರದಿಂದ 50,000 ಕೋಟಿ ಮೀಸಲು

- Advertisement -G L Acharya panikkar
- Advertisement -

ನವದೆಹಲಿ: ದೇಶದ ಎಲ್ಲ ಜನರಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ 50,000 ಕೋಟಿ ರುಪಾಯಿಗಳನ್ನು ತೆಗೆದಿರಿಸಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.


ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಅತಿ ದೊಡ್ಡ ದೇಶದ 130 ಕೋಟಿ ಜನಸಂಖ್ಯೆಗೆ ಕೊರೋನಾ ಲಸಿಕೆಗಾಗಿ ಒಬ್ಬರಿಗೆ 6ರಿಂದ 7 ಅಮೆರಿಕನ್ ಡಾಲರ್ ವೆಚ್ಚ ಆಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಅಂದಾಜು ಮಾಡಿದೆ ಎಂದು ತಿಳಿದುಬಂದಿದೆ. ಈ ಉದ್ದೇಶಕ್ಕಾಗಿ ಹಣಕಾಸಿಗೆ ಯಾವುದೇ ಹಣಕಾಸಿನ ಸಮಸ್ಯೆ ಇಲ್ಲ ಎಂದೂ ಹೇಳಲಾಗಿದೆ.


ದೇಶದಲ್ಲಿ ಕೊರೋನಾ ಮುಂದಿನ ಫೆಬ್ರವರಿ ಹೊತ್ತಿಗೆ ಹತೋಟಿಗೆ ಬರುತ್ತದೆ. ಕೊರೋನಾ ಬಿಕ್ಕಟ್ಟಿನಿಂದಾಗಿ ದೇಶದ ಆರ್ಥಿಕ ಪ್ರಗತಿಗೆ ಪೆಟ್ಟು ಬಿದ್ದಿದೆ. ಇನ್ನು ಅಕ್ಟೋಬರ್ ಕೊನೆ ವಾರ ಹಾಗೂ ನವೆಂಬರ್ ಮೊದಲ ವಾರದ ಹಬ್ಬದ ಋತುವಿನಲ್ಲಿ ಕೊರೋನಾ ಸೋಂಕು ಹೆಚ್ಚಾಗಬಹುದು ಎಂದು ಹೇಳಲಾಗಿದೆ.


ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ನಿತ್ಯವೂ ಎಂಟು ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ದೇಶದ ಜನರಿಗೆ ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಕೊರೋನಾ ಲಸಿಕೆ ತಲುಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

- Advertisement -

Related news

error: Content is protected !!