Sunday, May 5, 2024
spot_imgspot_img
spot_imgspot_img

ದೇಶದ ಪ್ರತಿಯೊಂದು ಜಿಲ್ಲೆಗಳಲ್ಲಿ 551 ಆಕ್ಸಿಜನ್ ಪ್ಲಾಂಟ್​ಗಳ ಸ್ಥಾಪನೆ: ಕೇಂದ್ರ ಸರ್ಕಾರ

- Advertisement -G L Acharya panikkar
- Advertisement -

ನವದೆಹಲಿ: ದೇಶದಲ್ಲಿ ಪ್ರತಿದಿನ ಹಲವಾರು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಬಗ್ಗೆ ವರದಿಯಾಗುತ್ತಿದೆ. ಇದಕ್ಕೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಣವೊಂದನ್ನ ಕೈಗೊಂಡಿದೆ. ಪ್ರತಿ ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಕೇಂದ್ರ ಮುಂದಾಗಿದೆ. ಇದಕ್ಕೆ ಪಿಎಂ-ಕೇರ್ಸ್​ನಿಂದ ಹಣ ಮಂಜೂರು ಮಾಡಲಾಗುತ್ತದೆ.

ಭಾರತದಲ್ಲಿ ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಕಳೆದ ವರ್ಷ ಮಾರ್ಚ್​​ನಲ್ಲಿ ಪಿಎಂ ಕೇರ್ಸ್ ನಿಧಿ(Prime Minister’s Citizen Assistance and Relief in Emergency Situations Fund) ಸ್ಥಾಪಿಸಲಾಗಿದೆ. ಈಗ ಇದರ​​ ಅಡಿಯಲ್ಲಿ ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 551 ಆಕ್ಸಿಜನ್ ಉತ್ಪಾದನಾ ಪ್ಲಾಂಟ್​​ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ದೇಶದ ಆಸ್ಪತ್ರೆಗಳಿಗೆ ಆಕ್ಸಿಜನ್ ಲಭ್ಯತೆಯನ್ನು ಹೆಚ್ಚಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಿರ್ದೇಶನ ನೀಡಿದ್ದಾರೆ. ಅದರಂತೆ​​ 551 ಪ್ರೆಶರ್ ಸ್ವಿಂಗ್ ಆಡ್​​ಸಾರ್ಪ್ಷನ್​ ಮೆಡಿಕಲ್ ಆಕ್ಸಿಜನ್ ಜನರೇಷನ್ ಪ್ಲಾಂಟ್‌ಗಳ ಸ್ಥಾಪನೆಗೆ ಹಣ ಹಂಚಿಕೆ ಮಾಡಲು ಪಿಎಂ ಕೇರ್ಸ್ ಫಂಡ್ ತಾತ್ವಿಕ ಅನುಮೋದನೆ ನೀಡಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.ಈ ಘಟಕಗಳು ಆದಷ್ಟು ಬೇಗ ಸಕ್ರಿಯವಾಗಬೇಕು ಎಂದು ಪ್ರಧಾನಿ ನಿರ್ದೇಶಿಸಿದ್ದಾರೆ.

ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಜಿಲ್ಲಾ ಕೇಂದ್ರದಲ್ಲಿ ಗುರುತಿಸಲಾದ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಮೀಸಲು ಆಕ್ಸಿಜನ್ ಪ್ಲಾಂಟ್​​ಗಳು ಸ್ಥಾಪಿಸಲಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಇದರ ಖರೀದಿ ಮಾಡಲಾಗುತ್ತದೆ ಎಂದು ಹೇಳಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಈ ಪ್ರತಿಯೊಂದು ಸರ್ಕಾರಿ ಆಸ್ಪತ್ರೆ ಆಮ್ಲಜನಕ ಉತ್ಪಾದನಾ ಸೌಲಭ್ಯ ಹೊಂದಿರುವಂತೆ ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶ.

ಇಂತಹ ಇನ್​ ಹೌಸ್​ ಆಕ್ಸಿಜನ್ ಉತ್ಪಾದನಾ ವ್ಯವಸ್ಥೆಯ ಮೂಲಕ ಈ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲೆಗಳಲ್ಲಿ ಪ್ರತಿದಿನದ ಮೆಡಿಕಲ್ ಆಮ್ಲಜನಕ ಅಗತ್ಯತೆಯನ್ನ ಪೂರೈಸಬಹುದು. ಈ ಮೂಲಕ ದೀರ್ಘ ಕಾಲದವರೆಗೆ ಜಿಲ್ಲೆಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಇದ್ದಕ್ಕಿದ್ದಂತೆ ಆಕ್ಸಿಜನ್ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ. ಹಾಗೂ ಕೊರೊನಾ ಸೋಂಕಿತರು ಹಾಗೂ ಆಕ್ಸಿಜನ್ ಅಗತ್ಯವಿರುವ ಇತರೆ ರೋಗಿಗಳಿಗೆ ತಡೆರಹಿತ ಆಮ್ಲಜನಕ ಪೂರೈಕೆಗೆ ನೆರವಾಗಲಿದೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.

driving
- Advertisement -

Related news

error: Content is protected !!