Friday, October 11, 2024
spot_imgspot_img
spot_imgspot_img

ಕೊರೊನಾ ಭೀತಿ: ಇಂದು ರಾಜ್ಯಕ್ಕೆ ಕೇಂದ್ರದ ತಂಡ ಭೇಟಿ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಜೋರಾಗುತ್ತಿದೆ. ಹೀಗಾಗಿ ಕೇಂದ್ರದ ಹಿರಿಯ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡಲಿದೆ. ರಾಜ್ಯದ ಪರಿಸ್ಥಿತಿಯನ್ನು 2 ದಿನಗಳ ಕಾಲ ಅವಲೋಕಿಸಲಿದ್ದಾರೆ ಎಂದು ತಿಳಿದುಬಂದಿದೆ.

2 ದಿನಗಳ ಅಧ್ಯಯನ ನಡೆಸಿದ ಬಳಿಕ ಅಧಿಕಾರಿಗಳು ಕೇಂದ್ರ ಸಚಿವಾಲಯಕ್ಕೆ ಮಾಹಿತಿ ನೀಡಲಿದ್ದಾರೆ. ನಂತರ ಕೇಂದ್ರ ಸರ್ಕಾರ ಪರಿಸ್ಥಿತಿ ನಿಯಂತ್ರಿಸಲು ಮತ್ತಷ್ಟು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ ಸಿಎಂ ಬಿ.ಎಸ್.ಯಡಿಯೂರಪ್ಪ ಕೆಂದ್ರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಕೊರೊನಾ ನಿಯಂತ್ರಿಸಲು ರಾಜ್ಯದಲ್ಲಿ ಕೈಗೊಂಡ ಕ್ರಮದ ಬಗ್ಗೆ ಅವರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!