Friday, July 24, 2026
spot_imgspot_img
spot_imgspot_img

ಇಂದಿನಿಂದ ಸಿಇಟಿ ಪರೀಕ್ಷೆ-ವಿದ್ಯಾರ್ಥಿಗಳಿಗೆ ಡ್ರೆಸ್‌ಕೋಡ್ ಬಿಡುಗಡೆ

- Advertisement -
- Advertisement -

ರಾಜ್ಯದ್ಯಾಂತ ಇಂದಿನಿಂದ ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಡ್ರೆಸ್‌ಕೋಡ್ ಬಿಡುಗಡೆ ಮಾಡಿದೆ.ವಿದ್ಯಾರ್ಥಿಗಳು ಕಡ್ಡಾಯವಾಗಿ ಡ್ರೆಸ್‌ಕೋಡ್ ಪಾಲನೆ ಮಾಡುವಂತೆ ಕೆಇಎ ಸೂಚನೆ ನೀಡಿದೆ.

ಪರೀಕ್ಷಾ ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಿದೆಸಿಇಟಿ ಪರೀಕ್ಷೆಯ ನಿಯಮ:- ವೆಬ್ ಕಾಸ್ಟಿಂಗ್ ಮೂಲಕ ಎಲ್ಲ 775 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ.-ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ.- ಪರೀಕ್ಷೆಗೆ ಒಂದೂವರೆ ಗಂಟೆ ಮುಂಚೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಹಾಜರಾಗಬೇಕು.-ಪೊಲೀಸ್/ ಗೃಹ ರಕ್ಷಕ ದಳದ ಸಿಬ್ಬಂದಿ ಅಭ್ಯರ್ಥಿಗಳ ತಪಾಸಣೆ ಬಳಿಕವೇ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅವಕಾಶ.- ಕನಿಷ್ಠ ಒಂದೂವರೆ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಬಂದು ತಪಾಸಣೆಗೆ ಒಳಗಾಗಬೇಕು.-ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.-ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಸಲುವಾಗಿ ವ್ಯವಸ್ಥೆ ಜಾರಿ.

- Advertisement -

Related news

error: Content is protected !!