Thursday, June 18, 2026
spot_imgspot_img
spot_imgspot_img

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರ ಬಂಧನ

- Advertisement -
- Advertisement -

ಪುತ್ತೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಖಂಡಿಸಿ ಪುತ್ತೂರಿನಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಲಕ್ನೋ ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿ ಕ್ಲೀನ್‌ ಚಿಟ್‌ ನೀಡಿರುವ ಕ್ರಮವನ್ನು ಖಂಡಿಸಿ ಪುತ್ತೂರಿನ ಬಸ್‌ ಸ್ಟ್ಯಾಂಡ್‌ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನಾ ನಿರತರು ತೀರ್ಪುವಿನ ವಿರುದ್ಧ ಘೋಷಣೆ ಕೂಗುತ್ತಿದ್ದಂತೆ ಪುತ್ತೂರು ನಗರ ಠಾಣೆಯ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!