Sunday, September 13, 2026
spot_imgspot_img
spot_imgspot_img

ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು

- Advertisement -
- Advertisement -

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿರುವ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನಿತ ಆರೋಪಿತನ ಮುಖಚಹರೆ ಪತ್ತೆಯಾಗಿದ್ದು, ಸಾರ್ವಜನಿಕರ ಸಹಕಾರವನ್ನು ಪೊಲೀಸರು ಕೋರಿದ್ದಾರೆ.

ಅಪರಾಧ ಕ್ರಮ ಸಂಖ್ಯೆ 16/2026ರಂತೆ, ಕಲಂ 309(4) ಭಾರತೀಯ ನ್ಯಾಯ ಸಂಹಿತೆ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆಯ ವೇಳೆ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿತನ ಮುಖಚಹರೆ ಪತ್ತೆಯಾಗಿದೆ. ಸದರಿ ವ್ಯಕ್ತಿಯ ಗುರುತು ಅಥವಾ ಇರುವಿಕೆ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

ಮಾಹಿತಿ ನೀಡುವವರು ಕೆಳಗಿನ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ:ಜಿಲ್ಲಾ ಕಂಟ್ರೋಲ್ ರೂಂ: 0824 2220500, 9480805300ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ: 08255-235000, 9480805368 ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿರಿಸಲಾಗುವುದು ಎಂದು ಪೊಲೀಸ್ ಇಲಾಖೆ ಭರವಸೆ ನೀಡಿದೆ.

- Advertisement -

Related news

error: Content is protected !!