Thursday, May 9, 2024
spot_imgspot_img
spot_imgspot_img

ಚೈತ್ರಾ ಕುಂದಾಪುರ ವಂಚನೆ ಪ್ರಕರಣ; 1 ಕೋಟಿ ಆಸ್ತಿ, 65 ಲಕ್ಷದ ಚಿನ್ನ, 40 ಲಕ್ಷ ರೂ. ಜಪ್ತಿ

- Advertisement -G L Acharya panikkar
- Advertisement -

ಉಡುಪಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಇದೀಗ ಬಹಿರಂಗವಾಗುತ್ತಿದೆ. ಆಕೆ ಆಪ್ತನ ಹೆಸರಲ್ಲಿ ಸಹಕಾರಿ ಬ್ಯಾಂಕ್‌ನಲ್ಲಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 40 ಲಕ್ಷ ರೂ. ಠೇವಣಿ ಇಟ್ಟಿರುವುದು ಪತ್ತೆಯಾಗಿದೆ.

ಜೊತೆಗೆ 1.08 ಕೋಟಿ ರೂ. ಆಸ್ತಿ-ಪಾಸ್ತಿ ದಾಖಲೆಗಳು ಕೂಡ ಬೆಂಗಳೂರಿನ ಸಿಸಿಬಿ ಪೊಲೀಸರ ಕೈಸೇರಿವೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಬೈಂದೂರು, ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿಗೆ ಭೇಟಿ ನೀಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಮತ್ತು ಆಕೆಯ ಆಪ್ತರ ಆಸ್ತಿ, ಬ್ಯಾಂಕ್‌ ಖಾತೆಗಳನ್ನು ಜಾಲಾಡುತ್ತಿದ್ದು, ಈ ವೇಳೆ ಬೇನಾಮಿ ಹೆಸರಲ್ಲಿರುವ ಒಂದಷ್ಟು ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀಕಾಂತ್‌ನ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಆತನನ್ನು ಬೆಂಗಳೂರಿನಿಂದ ಉಪ್ಪೂರಿಗೆ ಕರೆತಂದು ಆಸ್ತಿ-ಪಾಸ್ತಿ ದಾಖಲೆ ಪರಿಶೀಲಿಸಿದ್ದಾರೆ. ಉಪ್ಪೂರಿನ ಶ್ರೀರಾಮ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಶ್ರೀಕಾಂತ್‌ ಹೆಸರಿನಲ್ಲಿ ಚೈತ್ರಾ ಇಟ್ಟಿದ್ದ 40 ಲಕ್ಷ ಠೇವಣಿ, 65 ಲಕ್ಷದ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಈ ವೇಳೆ ಚೈತ್ರಾಗೆ ಸೇರಿದ್ದೆನ್ನಲಾದ 1.08 ಕೋಟಿ ರೂ. ಆಸ್ತಿ-ಪಾಸ್ತಿ ದಾಖಲೆಗಳು ಕೂಡ ಬೆಂಗಳೂರಿನ ಸಿಸಿಬಿ ಪೊಲೀಸರ ಕೈಸೇರಿದೆ ಎಂದು ಹೇಳಲಾಗುತ್ತಿದೆ.

ಉದ್ಯಮಿ ಗೋವಿಂದ ಪೂಜಾರಿಯಿಂದ ಬಂದಿದ್ದ ಹಣದಲ್ಲಿ ಸಾಕಷ್ಟು ಹಣವನ್ನು ಚೈತ್ರಾ ಜಮೀನು, ಮನೆ ನಿರ್ಮಾಣದಲ್ಲಿ ಹೂಡಿಕೆ ಮಾಡಿರುವುದು ಬೆಳಕಿಗೆ ಬಂದಿದೆ. ಕುಂದಾಪುರದಲ್ಲಿರುವ ಆಕೆಯ ಹಳೆಯ ಮನೆಯ ಪಕ್ಕದಲ್ಲಿ ಚೈತ್ರಾ ಭೂಮಿ ಖರೀದಿಸಿದ್ದು, ಅಲ್ಲಿ ಮಹಡಿ ಮನೆಯೊಂದನ್ನು ಕಟ್ಟಿದ್ದಾರೆ ಎನ್ನಲಾಗುತ್ತಿದೆ. ಶ್ರೀಕಾಂತ್ ಕೂಡ ತನ್ನ ಪಾಲಿಗೆ ಬಂದಿದ್ದ ಹಣದಲ್ಲಿ ಕಾರ್ಕಳದಲ್ಲಿ ಜಮೀನು ಖರೀದಿಸಿ ಮನೆ ಕಟ್ಟಲಾರಂಭಿಸಿದ್ದು, ನಿರ್ಮಾಣ ಹಂತದಲ್ಲಿರುವ ಮಹಡಿ ಮನೆಯನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ.

 ಶ್ರೀಕಾಂತ್ ನಾಯಕ್ ನನ್ನು ಜಿಲ್ಲೆಯ ಖಾಸಗಿ ಸೊಸೈಟಿಯೊಂದಕ್ಕೆ ಕರೆದೊಯ್ದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸೊಸೈಟಿಯಲ್ಲಿ ಆರೋಪಿಗಳು ಹಣ ಮತ್ತು ಚಿನ್ನ ಅಡವಿರಿಸಿದ ಬಗ್ಗೆ ಆಸ್ತಿ ಪತ್ರ ಸಿಕ್ಕಿದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!