ಬಿಗ್ ಬಾಸ್ ಸೀಸನ್ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ಈಗಾಗಲೇ ಎರಡು ಸ್ಪರ್ಧಿಗಳು ಅನೌನ್ಸ್ ಆಗಿದ್ದಾರೆ. ಬಿಗ್ ಬಾಸ್ ಸೀಸನ್ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ರಾಜಾ ರಾಣಿ ರೀಲೋಡೆಡ್ನ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್ ಆಗಿದೆ. ಮೊದಲ ಸ್ಪರ್ಧಿಯಾಗಿ ಗೌತಮ್ ಜಾದವ್ ಎಂಟ್ರಿ ಕೊಟ್ಟಿದ್ದಾರೆ.
ಎರಡನೇ ಸ್ಪರ್ಧಿಯಾಗಿ ಲಾಯರ್ ಜಗದೀಶ್ ಎಂಟ್ರಿ ಕೊಟ್ಟಿದ್ದಾರೆ. ಒಂದಲ್ಲ ಒಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಲಾಯರ್ ಜಗದೀಶ್ ಅವರಿಗೆ ʼಬಿಗ್‌ಬಾಸ್ʼ ಆಫರ್ ಸಿಕ್ಕಿದೆ. ಮೂರನೇ ಸ್ಪರ್ಧಿಯಾಗಿ ಚೈತ್ರಾ ಕುಂದಾಪುರ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಿದ್ದಾರೆ.
ಕುಂದಾಪುರ ಮೂಲದ ಚೈತ್ರಾ ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಳೆದ ಕೆಲ ಸಮಯದ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪ ಅವರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.
16 ಜನ ಪ್ರಬಲ ಸ್ಪರ್ಧಿಗಳ ನಡುವೆ ಚೈತ್ರಾ ಪೈಪೋಟಿ ಕೊಡುತ್ತಾರಾ? ಕಾಯಬೇಕಿದೆ. ಇದೇ ಸೆ.29ಕ್ಕೆ ಬಿಗ್ ಬಾಸ್ 11ಕ್ಕೆ ಅಧಿಕೃತ ಚಾಲನೆ ಸಿಗಲಿದೆ.