- Advertisement -
- Advertisement -



ಚಾಮರಾಜನಗರ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೂತನೂರು ಹಾಗೂ ಭೀಮನಬೀಡು ಗ್ರಾಮದ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಭೀಮನಬೀಡು ಗ್ರಾಮದ ಪ್ರವೀಣ್ (19) ಹಾಗೂ ಕಣ್ಣೇಗಾಲ ಗ್ರಾಮದ ಮಹದೇವಯ್ಯ (45) ಎಂದು ಗುರುತಿಸಲಾಗಿದೆ.
ಕಣ್ಣೇಗಾಲ ಗ್ರಾಮದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಗುಂಡ್ಲುಪೇಟೆಯಿಂದ ಭೀಮನಬೀಡು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -








