- Advertisement -
- Advertisement -





ಚಾಮರಾಜನಗರ: ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ(ಗಂಡಾನೆ) ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ನಡೆದಿದೆ.
ಗೋಪಿನಾಥಂ ಜಲಾಶಯದಲ್ಲಿ ನೀರು ಕುಡಿಯಲು ಬಂದಿದ್ದ ವೇಳೆ ಗಂಡಾನೆ ಗಾಯಗೊಂಡಿತ್ತು. ಈ ವಿಷಯವನ್ನು ಸ್ಥಳೀಯರು ಅರಣ್ಯ ಸಿಬ್ಬಂದಿ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಕೂಡ ಕಾಳಜಿ ವಹಿಸಿ ಚಿಕಿತ್ಸೆ ಕೊಡಿಸುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾಡಾನೆ ಮೃತಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
- Advertisement -








