- Advertisement -
- Advertisement -





ಚಾಮರಾಜನಗರ: ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಹರಳೆ ಗ್ರಾಮದ ಬಳಿ ನಡೆದಿದೆ.
ಮೃತ ಬಾಲಕನನ್ನು ಯಶವಂತ್ (11) ಎಂದು ಗುರುತಿಸಲಾಗಿದೆ. ಬಾಲಕ ಸೈಕಲ್ ಹೊಡೆಯುತ್ತಿದ್ದಾಗ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ಬಾಲಕ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದ. ಕುಟುಂಬಸ್ಥರು ಮೊನ್ನೆಯಷ್ಟೇ ಸೈಕಲ್ ಕೊಡಿಸಿದ್ದರು. ಘಟನೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ, ಟೆಂಪೋ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








