- Advertisement -
- Advertisement -
ಚಾಮರಾಜನಗರ: ಆಮ್ಲಜನಕ ಸಿಗದೇ ಉಸಿರಾಟದ ಸಮಸ್ಯೆಯುಂಟಾಗಿ 20ಕ್ಕೂ ಹೆಚ್ಚು ಕೊರೋನಾ ರೋಗಿಗಳು ಮೃತಪಟ್ಟಿರುವ ಘಟನೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ 16 ಮಂದಿ ಹಾಗೂ ಇಂದು ಬೆಳಗಿನ ಜಾವ 4ಕ್ಕೂ ಹೆಚ್ಚು ಜನರು ಆಕ್ಸಿಜನ್ ಸಿಗದೆ ನರಳಾಡಿ ಪ್ರಾಣಬಿಟ್ಟಿದ್ದಾರೆ. ಆಕ್ಸಿಜನ್ ಸಿಲಿಂಡರ್ಗಳು ಬರುವಷ್ಟರಲ್ಲಿ ಕೊರೋನಾ ರೋಗಿಗಳು ಕೊನೆಯುಸಿರೆಳೆದಿದ್ದಾರೆ.

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯ ಮುಂದೆ ದೌಡಾಯಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಸ್ಪತ್ರೆಯ ಮುಂಭಾಗ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.


- Advertisement -








