Saturday, April 20, 2024
spot_imgspot_img
spot_imgspot_img

ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಕಾಮುಕ ಅರೆಸ್ಟ್!

- Advertisement -G L Acharya panikkar
- Advertisement -

ಚಾಮರಾಜನಗರ: ಯುವಕನೊಬ್ಬ ಏಳು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ನಡೆದಿದೆ.

ಪ್ರಕರಣದ ಆರೋಪಿ ಸತೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಅಜ್ಜಿ ತಲೆ ನೋವಿನಿಂದ ಬಳಲುತ್ತಿದ್ದರು. ಈ ಕಾರಣಕ್ಕೆ ಅಪ್ರಾಪ್ತ ಬಾಲಕಿ 8.30ರ ಸುಮಾರಿಗೆ ಔಷಧ ತರಲು ಅಂಗಡಿಗೆ ಹೋಗಿದ್ದಳು. ಈ ವೇಳೆ ರಸ್ತೆಯಲ್ಲಿ ನಿಂತಿದ್ದ ಆರೋಪಿ ಸತೀಶ್ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುತ್ತೇನೆ ಎಂದು ಪುಸಲಾಯಿಸಿ ಸಮೀಪದ ಪೊದೆ ಬಳಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ದೂರಲಾಗಿದೆ.

ಈ ಘಟನೆ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!