

ಬೆಂಗಳೂರು : ರ್‍ಯಾಪರ್ ಚೆಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿಯೇ ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಲಯಕ್ಕೆ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜೂನ್.6ರ ನಿನ್ನೆ ಸಲ್ಲಿಸಿದ್ದಂತ ವಿಚ್ಚೇದನ ಅರ್ಜಿಯ ವಿಚಾರಣೆಯನ್ನು ಇಂದು ವಿಚಾರಣೆ ನಡೆಸಿತು.
ಈ ದಂಪತಿಯ ವಿಚ್ಛೇದನ ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ಯಾವುದೇ ದಂಪತಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ ತಿಂಗಳಾನುಗಟ್ಟಲೇ, ವರ್ಷಗಟ್ಟಲೇ ವಿಚಾರಣೆ ಕೋರ್ಟ್ನಲ್ಲಿ ನಡೆಯುತ್ತೆ. ಆದ್ರೆಮ ಚಂದನ್ ಶೆಟ್ಟಿ ದಂಪತಿ ವಿಚ್ಛೇದನ ಮಾತ್ರ ಒಂದೇ ದಿನದಲ್ಲಿ ಆಗಿದೆ. ಕಾರಣ ಇವರಿಬ್ಬರು ನಗು ನಗುತ್ತಲೇ, ಒಪ್ಪಂದದ ಮೇರೆಯಿಂದಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಕೋರ್ಟ್ಗೆ ಹಾಜರಾದ ವೇಳೆ ಈ ಜೋಡಿ ಅಕ್ಕಪಕ್ಕದಲ್ಲೇ ಇತ್ತು. ಹೀಗಾಗಿ ಬೇಗನೇ ವಿಚ್ಛೇದನ ಮಂಜೂರಾಗಲು ಪ್ರಮುಖ ಕಾರಣವಾಗಿದೆ.
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಮಿಡಿಯೇಷನ್‌ನಲ್ಲಿ ಡಿವೋರ್ಸ್ ಬಗ್ಗೆ ಒಪ್ಪಂದವಾಗಿದೆ. ಅದರ ಅಗ್ರಿಮೆಂಟ್ ಅನ್ನು ನ್ಯಾಯಾಧೀಶರ ಮುಂದೆ ಸಲ್ಲಿಕೆ ಮಾಡಲಾಗಿದ್ದು, ಅವರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ವಿಚಾರಣೆ ವೇಳೆ ನ್ಯಾಯಾಧೀಶರು ಇಬ್ಬರನ್ನು ಕರೆದು ಪ್ರಶ್ನಿಸಿದ್ದಾರೆ. ಪರಸ್ಪರ ಒಪ್ಪಿ ಬೇರೆ ಆಗಲು ನಿರ್ಧರಿಸಿದ್ದೇವೆ ಎಂದು ಜಡ್ಜ್ ಮುಂದೆ ದಂಪತಿ ಹೇಳಿಕೆ ನೀಡಿದ್ದಾರೆ. ಆಗ ಯಾವ ಕಾರಣಕ್ಕೆ ಎಂದು ಜಡ್ಜ್ ಪ್ರಶ್ನಿಸಿದ್ದು, ಸ್ವಲ್ಪ ಭಿನ್ನಾಭಿಪ್ರಾಯ ಇದೆ. ಇಬ್ಬರಿಗೂ ಕರಿಯರ್ ಬಗ್ಗೆ ಕನಸುಗಳು ಇವೆ. ಹೀಗಾಗಿ ಖುಷಿಯಾಗಿಯೇ ಒಪ್ಪಿದ್ದೇವೆ ಎಂಬ ಹೇಳಿಕೆ ನೀಡಿದ್ದಾರೆ.








