Friday, May 3, 2024
spot_imgspot_img
spot_imgspot_img

ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3

- Advertisement -G L Acharya panikkar
- Advertisement -

ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ‘ಚಂದ್ರಯಾನ-3’ ಮತ್ತೊಂದು ಮಹತ್ವದ ಹೆಜ್ಜೆ ಕ್ರಮಿಸಿದ್ದು, ಚಂದ್ರನ ಅಂಗಳದಲ್ಲಿ ಕಾಲಿರಿಸುವ ಪ್ರಯತ್ನದಲ್ಲಿ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ.

ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಟ್ವೀಟ್ ಮೂಲಕ ತಿಳಿಸಿದೆ.

ಜುಲೈ 14ರಂದು ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಇಸ್ರೋದ ಹೆವಿ-ಲಿಫ್ಟ್ ಲಾಂಚರ್ LVM-3 ಉಡಾವಣಾ ನೌಕೆಯಲ್ಲಿ ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3, ಸುಮಾರು ಮೂರನೇ ಎರಡರಷ್ಟು ದೂರವನ್ನು ಕ್ರಮಿಸಿದೆ. ಭೂಮಿಯ ಏಕೈಕ ಉಪಗ್ರಹದ ದಕ್ಷಿಣ ಧ್ರುವದಲ್ಲಿ ಅಧ್ಯಯನ ನಡೆಸಲು ತೆರಳಿರುವ ಚಂದ್ರಯಾನ- 3 ನೌಕೆಯು ಮತ್ತೊಂದು ಮಹತ್ವದ ಹಂತವನ್ನು ಕ್ರಮಿಸಿದೆ. ನೌಕೆಯು ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಇದರಿಂದ ಚಂದ್ರಯಾನ ಯೋಜನೆಯ ಮತ್ತೊಂದು ಮೈಲುಗಲ್ಲನ್ನು ಇಸ್ರೋ ದಾಟಿದೆ.

ಇದೇ ವೇಳೆ ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ ಪ್ರಕ್ರಿಯೆಯನ್ನು ಇಂದು ರಾತ್ರಿ 11 ಗಂಟೆಗೆ ನಡೆಸಲಾಗುತ್ತೆ. ಆಗಸ್ಟ್ ಮೊದಲ ವಾರದಲ್ಲಿ ನೌಕೆಯು ಚಂದ್ರನ ಸುತ್ತ 5- 6 ಕಕ್ಷೆಯ ಪಥವನ್ನು ಪೂರ್ಣಗೊಳಿಸಲು ತಯಾರಿ ನಡೆಸಿದೆ. ಕ್ರಮೇಣ ಅದು 100 ಕಿ.ಮೀ ಆರ್ಬಿಟ್​​ನ ವರ್ತುಲಕ್ಕೆ ಪರಿವರ್ತನೆಯಾಗಲಿದೆ. ಮುಂದಿನ ಹತ್ತು ದಿನಗಳಲ್ಲಿ ಚಂದ್ರನ ದಕ್ಷಿಣ ಧ್ರುವದ ಪ್ರದೇಶದ ಒಳಗೆ ಇಳಿಯಲು ಸೂಕ್ತವಾದ ಜಾಗವನ್ನು ನಿರ್ಧರಿಸಲಾಗುತ್ತದೆ. ಆಗಸ್ಟ್ 17ರಂದು ಪ್ರೊಪಲ್ಷನ್ ಮಾಡ್ಯೂಲ್ ಹಾಗೂ ಲ್ಯಾಂಡರ್ ಮಾಡ್ಯೂಲ್ ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 23ರ ಸಂಜೆ 5.47ರ ಸುಮಾರಿಗೆ ಚಂದ್ರಯಾನ ನೌಕೆಯ ಲ್ಯಾಂಡರ್ ಕಕ್ಷೆಯಿಂದ ಹೊರಬರುತ್ತದೆ ಮತ್ತು ಸುಗಮ ಲ್ಯಾಂಡಿಂಗ್‌ಗೆ ಪ್ರಯತ್ನ ಆರಂಭಿಸುತ್ತದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!