Tuesday, July 28, 2026
spot_imgspot_img
spot_imgspot_img

ಚನ್ನಗಿರಿ: ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ

- Advertisement -
- Advertisement -

ದಾವಣಗೆರೆ: ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ.

ಹತ್ಯೆಯಾದ ವ್ಯಕ್ತಿಯನ್ನು ಅತಾವುಲ್ಲಾ (46) ಎಂದು ಗುರುತಿಸಲಾಗಿದೆ. ಭದ್ರಾವತಿಯ ಶೇಖ್ ದಸ್ತುಗಿರಿ, ಜಬೀವುಲ್ಲಾ ಸಹಚರರಿಂದ ಕೊಲೆ ನಡೆದಿದೆ. ಈ ಹಿಂದೆ ಇಬ್ಬರ ನಡುವೆ ಹಣದ ವಿಚಾರಕ್ಕೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ಕಾರಣದಿಂದಾಗಿ ದುಷ್ಕರ್ಮಿಗಳು ಶುಕ್ರವಾರ (ಮೇ 15) ತಡರಾತ್ರಿ ಏಕಾಏಕಿ ಬೈಕ್‍ನಲ್ಲಿ ಬಂದು ದಾಳಿ ನಡೆಸಿ, ಕತ್ತಿ ಹಾಗೂ ಮಚ್ಚುಗಳಿಂದ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ.

ಚನ್ನಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!