ಚನ್ನರಾಯಪಟ್ಟಣದ ಪಿಎಸ್ಐ ಆತ್ಮಹತ್ಯೆಗೆ ಶರಣಾಗಿದ್ದು ಏಕೆ?
ಕಳೆದ 2ದಿನಗಳಿಂದ ನಡೆದ ಕೊಲೆಗೂ ಪಿಎಸ್ಐ ಆತ್ಮಹತ್ಯೆಗೂ ಇದ್ಯಾ ಸಂಬಂಧ?
ಆತ್ಮಹತ್ಯೆಗೂ ಮುನ್ನ ತಮ್ಮ ಸಹೋದ್ಯೋಗಿ ಜೊತೆ ಏನಂದಿದ್ರೂ ಪಿಎಸ್ಐ
ಚನ್ನರಾಯಪಟ್ಟಣ: ನಗರದಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಗಳನ್ನು ತೀವ್ರ ರಾಜಕೀಯ ಒತ್ತಡದ ಮಧ್ಯೆಯೂ ಬಂಧಿಸಿದ ಬೆನ್ನಲ್ಲೇ ಪಿಎಸ್ಐ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಪಿಎಸ್ ಐ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು.
ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕಿರಣ್ ಕುಮಾರ್ ಚನ್ನರಾಯಪಟ್ಟಣದ ತಮ್ಮ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಹೋಗಿದೆ. ಮೃತದೇಹ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
ಚನ್ನರಾಯಪಟ್ಟಣದಲ್ಲಿ ಕಳೆದೆರಡು ದಿನಗಳಲ್ಲಿ ಎರಡು ಕೊಲೆಗಳಾಗಿತ್ತು. ಕೊಲೆ ಆರೋಪಿಗಳನ್ನು ಬಂಧಿಸಿದ್ದ ಕಿರಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದರು.ಬೆಳಗ್ಗೆಯಷ್ಟೇ ಆರೋಪಿಗಳ ಹುಡುಕಾಟದಲ್ಲಿ ತೊಡಗಿ ಮನೆಗೆ ತೆರಳಿದ್ದ ಪಿಎಸ್ಐ ಬಳಿಕ ರೂಮಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸ್ಥಳಕ್ಕೆ ಎಎಸ್‌ಪಿ ನಂದಿನಿ, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.ಇಂದು ಚನ್ನರಾಯಪಟ್ಟಣಕ್ಕೆ ಐಜಿ-ಎಸ್ಪಿ ಭೇಟಿ ಹಿನ್ನಲೆ,ತಮ್ಮ ಸಹೋದ್ಯೋಗಿಯೊಟ್ಟಿಗೆ ನಮ್ಮನ್ನ ಸಸ್ಪೆಂಡ್ ಮಾಡಿ ಬಿಡ್ತಾರೆ ಎಂದು ಹೇಳಿಕೊಂಡಿದ್ದ ಪಿಎಸ್ಐ. ಚನ್ನರಾಯಪಟ್ಟಣದ ಕೆಲ ವಾಟ್ಸಾಪ್ ಗ್ರೂಪ್ಗಳಲ್ಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಮೆಸೇಜ್ ಹರಿಬಿಡಲಾಗಿತ್ತು.ಆದರೆ ಅದಕ್ಕೂ ಮುನ್ನ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿರುವುದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.