- Advertisement -
- Advertisement -
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಹಾಮಳೆ ಮುಂದುವರಿದಿದೆ. ಚಾರ್ಮಾಡಿ ಘಾಟ್ ನ ಅಲೇಖಾನ್ ಬಳಿ ಗುಡ್ಡ ಕುಸಿತ ಉಂಟಾಗಿದೆ. ಪರಿಣಾಮ ಭಾರೀ ಗಾತ್ರದ ಬಂಡೆ, ಮರ, ಮಣ್ಣು ರಸ್ತೆಗೆ ಬಿದ್ದಿದೆ. ಹೀಗಾಗಿ ಹೆದ್ದಾರಿ ಪ್ರಾಧಿಕಾರ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿರುತ್ತಿರುವ ಹಿನ್ನಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಮತ್ತೊಂದುಕಡೆ ಭದ್ರಾ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬಾಳೆಹೊನ್ನೂರು ಭಾಗದಲ್ಲಿ ಪ್ರವಾಹ ಭೀತಿ ಎದುರಾಗಿದೆ. ನಗರದ ಸಂತೆ ಮೈದಾನ ಹಾಗೂ ಕಟ್ಟಡಗಳು ಜಲಾವೃತಗೊಂಡಿದೆ. ಹೀಗಾಗಿ ಬಾಳೆಹೊನ್ನುರು-ಕಳಸ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಶೃಂಗೇರಿ ತಟದ ಮನೆಗಳಿಗೆ ನುಗ್ಗಿದ ನೀರು:
ಶೃಂಗೇರಿ ತಟದ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತುಂಗಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ನದಿಗಳು ಜಲಾವೃತವಾಗಿದೆ. ಮಂಗಳೂರು-ಶೃಂಗೇರಿ ಹೆದ್ದಾರಿ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
- Advertisement -