Saturday, October 5, 2024
spot_imgspot_img
spot_imgspot_img

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ

- Advertisement -
- Advertisement -

ಬೆಳ್ತಂಗಡಿ: ದಕ್ಷಿಣಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಸೇತುವಾಗಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ತಕ್ಷಣದಿಂದ ವಾಹನ ನಿಲುಗಡೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.


ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಈ ಬಗ್ಗೆ ಸೂಚನೆ ನೀಡುತ್ತಿದ್ದು, ಸೂಚನಾ ಫಲಕವನ್ನೂ ಹಾಕಲಾಗಿದೆ. ಮದ್ಯಪಾನ ಹಾಗೂ ಪ್ಲಾಸ್ಟಿಕ್ ಬಳಕೆಯನ್ನೂ ನಿಷೇಧಿಸಲಾಗಿದ್ದು , ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಚಿಕ್ಕಮಗಳೂರು ಜಿಲ್ಲಾಡಳಿತದಿಂದಸೂಚನಾ ಫಲಕ ಹಾಕಲಾಗಿದೆ.ಪೋಲಿಸರು ಶನಿವಾರದಿಂದಲೇ ವಾಹನದಲ್ಲಿ ಗಸ್ತು ತಿರುಗಲಿದ್ದು ಪ್ರಯಾಣಿಕರು ಘಾಟಿ ರಸ್ತೆಯಲ್ಲಿ ವಾಹನ ನಿಲ್ಲಿಸಿ ಮೋಜು-ಮಸ್ತಿ ಮಾಡಿದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



- Advertisement -

Related news

error: Content is protected !!