- Advertisement -
- Advertisement -
ಚಿಕ್ಕಮಗಳೂರು : ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಡಿ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿಯುವ ಭೀತಿ ಎದುರಾಗಿದ್ದು ಇದನ್ನು ತಪ್ಪಿಸಲು ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ತಿಳಿಸಿದ್ದಾರೆ.
ಕಳೆದೊಂದು ವಾರದಿಂದ ಚಿಕ್ಕಮಗಳೂರು, ಕೊಟ್ಟಿಗೆಹಾರ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ ರಾತ್ರಿ ವಾಹನ ಸಂಚಾರ ನಿಷೇಧಿಸಿ ಆದೇಶ ನೀಡಲಾಗಿದೆ.ಹಾಗಾಗಿ ಇನ್ನು ಮುಂದೆ ಮುಂದಿನ ಆದೇಶದವರೆಗೆ ರಾತ್ರಿ ಚಾಲನೆಗೆ ಘಾಟಿಯಲ್ಲಿ ಅವಕಾಶವಿಲ್ಲ.
- Advertisement -