- Advertisement -
- Advertisement -
ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್‌ಗೆ ಜಾಮೀನು ಮಂಜೂರು ಆಗಿದೆ. ಇಂದು ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್ ಅವರಿಗೆ ಜೈಲು ಸೇರಿದ ಎರಡೂವರೆ ತಿಂಗಳ ಬಳಿಕ ಜಾಮೀನು ಸಿಕ್ಕಿದೆ. ಬೆಂಗಳೂರಿನಲ್ಲಿ ಚೈತ್ರಾ ಪರ ವಕೀಲ ಹರ್ಷ ಮುತಾಲಿಕ್ ಅವರು ವಾದ ಆಲಿಸಿದ ನ್ಯಾಯಾಲಯವು ಚೈತ್ರಾ ಹಾಗೂ ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
1 ಲಕ್ಷ ರೂ. ಬಾಂಡ್, ಇಬ್ಬರ ಶೂರಿಟಿ, ಬೆಂಗಳೂರು ಬಿಟ್ಟು ತೆರಳಬಾರದು ಎಂಬ ಆದೇಶದ ಜೊತೆಗೆ, ಸಾಕ್ಷಿಗಳ ನಾಶಕ್ಕೆ ಅಥವಾ ಆರೋಪಿಗಳ ವಿರುದ್ಧ ಇರುವ ಸಾಕ್ಷಿದಾರರ ಮೇಲೆ ಪ್ರಭಾವ ಬೀರದಂತೆ ಷರತ್ತು ಹಾಕಲಾಗಿದೆ.
- Advertisement -