Friday, June 5, 2026
spot_imgspot_img
spot_imgspot_img

ಚೆಕ್‌ಬೌನ್ಸ್‌ ಪ್ರಕರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್

- Advertisement -
- Advertisement -

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಕೇಸ್​ನ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರಗೆ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ.

ಚೆಕ್​​ಬೌನ್ಸ್​ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ದೂರುದಾರ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಅನಿಲ್ ರಾಜಶೇಖರ್ ಚುಂಡೂರು ಭಾಸ್ಕರ್ ಪಾಲುದಾರಿಕೆಯ ಬಿ.ಸಿ. ಇನ್ಫ್ರಾಸ್ಟ್ರಕ್ಚರ್ ಅಂಡ್ ರಿಸೋರ್ಸ್ ಕಂಪನಿ ನಡುವೆ 2013 ರಿಂದಲೂ ಹಣಕಾಸು ವಿವಾದವಿತ್ತು. ವಿಎಸ್‌ಎಲ್ ಕಂಪೆನಿ ಪರವಾಗಿ ಕೋರ್ಟ್ ಆದೇಶ ನೀಡಿದ್ದು, ಬಿ. ನಾಗೇಂದ್ರ ಪಾಲುದಾರಿಕೆಯ ಕಂಪೆನಿ ಒಟ್ಟು 2 ಕೋಟಿ 53 ಲಕ್ಷ ಪಾವತಿಸಬೇಕಿತ್ತು. ಇದರ ಭಾಗವಾಗಿ 1 ಕೋಟಿ ರೂಪಾಯಿಯ ಚೆಕ್ ಅನ್ನು ನೀಡಲಾಗಿತ್ತು.

- Advertisement -

Related news

error: Content is protected !!